ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲಂಚ ಕೊಟ್ಟು ಕೊಟ್ಟು ಸಾಕಾಗೈತ್ರಿ

ಧಾರವಾಡ: ಅಬಕಾರಿ ಇಲಾಖೆ ಅಧಿಕಾರಿಗಳು ಲಂಚ, ಮಾಮೂಲಿಗಾಗಿ ಸಾಕಷ್ಟು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ವೈನ್ ಡೀಲರ್ಸ್ ಅಸೋಸಿಯೇಶನ್ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಬಕಾರಿ ಅಧಿಕಾರಿಗಳ ಬೇನಾಮಿ ಆಸ್ತಿಗಳ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಅಲ್ಲದೇ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಅಬಕಾರಿ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಲಾಯಿತು.

ರಾಜ್ಯದ ಚಿಲ್ಲರೆ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಸರ್ಕಾರ ಪರಿಗಣಿಸಬೇಕು. ಪೊಲೀಸ್ ಇಲಾಖೆಯ ಹಸ್ತಕ್ಷೇಪ ಮತ್ತು ಅನಗತ್ಯ ಸನ್ನದುಗಳನ್ನು ಬಂದ್ ಮಾಡುವ ಕುರಿತು ಅಬಕಾರಿ ಕಾಯ್ದೆ 22(1) ಸಂಪೂರ್ಣವಾಗಿ ದುರುಪಯೋಗವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Edited By : Manjunath H D
Kshetra Samachara

Kshetra Samachara

02/02/2021 09:24 pm

Cinque Terre

23.77 K

Cinque Terre

1

ಸಂಬಂಧಿತ ಸುದ್ದಿ