ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಮ ಪಂಚಾಯತಿ ಚುನಾವಣೆ ಹೊಸ ದಾಖಲೆ ಬರೆದ ದಂಪತಿ : ಪತ್ನಿಅಧ್ಯಕ್ಷೆ,ಪತಿ ಉಪಾಧ್ಯಕ್ಷ..!

ಹುಬ್ಬಳ್ಳಿ:ರಾಜ್ಯದ ಎಲ್ಲ ಗ್ರಾಮ‌ ಪಂಚಾಯತಗಳಿಗೆ ಇದೀಗ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಯುತ್ತಿದೆ. ಆದರೆ ರಾಜ್ಯದ ಪಂಚಾಯತ ರಾಜ್ ಇತಿಹಾಸದಲ್ಲಿಯೇ ಮೊದಲ ಭಾರಿಗೆ ಗ್ರಾಮ ಪಂಚಾಯತವೊಂದರಲ್ಲಿ ಪತ್ನಿ ಅಧ್ಯಕ್ಷೆಯಾಗಿ. ಪತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯತಿಗೆ ಅಧ್ಯಕ್ಷೆಯಾಗಿ ಪತ್ನಿ, ಉಪಾಧ್ಯಕ್ಷರಾಗಿ ಪತಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ವಿಶಾಲಾಕ್ಷಿ ಚೆನ್ನಬಸನಗೌಡ ಹನಮಂತಗೌಡ್ರ ಅಧ್ಯಕ್ಷೆಯಾಗಿಯೂ, ಇವರ ಪತಿ ಚೆನ್ನಬಸನಗೌಡ ಹನಮಂತಗೌಡ್ರ ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ದಂಪತಿಗಳನ್ನು ಆಯ್ಕೆ ಮಾಡಲು ವರೂರು ಹಾಗೂ ಕಂಪ್ಲಿಕೊಪ್ಪ ಗ್ರಾಮದ ಪ್ರತಿಯೊಬ್ಬರು ಶ್ರಮಿಸಿದ್ದು, ಯಾವುದೇ ರೀತಿಯ ತೊಂದರೆಗಳಿಲ್ಲದೇ ಆಯ್ಕೆ ಪ್ರಕ್ರಿಯೆ ನಡೆದಿದೆ.

ವರೂರ ಗ್ರಾಮ ಪಂಚಾಯತಿಗೆ ಆಯ್ಕೆಯಾದ ನೂತನ ಸದಸ್ಯರು ಹಾಗೂ ಗ್ರಾಮಸ್ಥರು ಪಕ್ಷಾತೀತವಾಗಿ ಪತಿ. ಪತ್ನಿಯನ್ನು ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ದಂಪತಿಗಳನ್ನು ಆಯ್ಕೆ ಮಾಡಿದ್ದು ವಿಶೇಷವಾಗಿದೆ.

Edited By : Nirmala Aralikatti
Kshetra Samachara

Kshetra Samachara

03/02/2021 11:56 am

Cinque Terre

28.82 K

Cinque Terre

12

ಸಂಬಂಧಿತ ಸುದ್ದಿ