ನವಲಗುಂದ: ಪಟ್ಟಣದ ನೂತನ ತರಕಾರಿ ಮಾರುಕಟ್ಟೆ ನಿರ್ಮಾಣ ಹಾಗೂ ನೀಲಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಮಂಜೂರಾತಿಗಾಗಿ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವರಾದ ಬೈರತಿ ಬಸವರಾಜ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ, ಧಾರವಾಡ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಮುಖಂಡರಾದ ಮಹಾಂತೇಶ ಕಲಾಲ, ಪುರಸಭೆಯ ಅಧ್ಯಕ್ಷ ಮಂಜುನಾಥ್ ಜಾಧವ್, ಪುರಸಭೆಯ ಮುಖ್ಯಾಧಿಕಾರಿಗಳಾದ ಎನ್ ಎಚ್ ಖುದಾನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Kshetra Samachara
03/02/2021 12:12 pm