ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ಹುಬ್ಬಳ್ಳಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು ಹಾಗೂ ಮಾಲೀಕರ ಸಂಘಟನೆ ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು.
ಡಿಸೇಲ್, ಪೆಟ್ರೋಲ್, ಎಲ್.ಪಿ.ಜಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಆಟೋದಲ್ಲಿ ನೂರು ಇನ್ನೂರು ರೂಪಾಯಿಗಳಲ್ಲಿ ಜೀವನ ನಡೆಸುವ ಆಟೋ ಚಾಲಕರ ಜೀವನದ ಮೇಲೆ ದರ ಏರಿಕೆ ಬರೆ ಹಾಕಿದಂತಾಗಿದ್ದು,ಜೀವನ ನಡೆಸುವುದು ದುಸ್ತರವಾಗಿದೆ ಕೂಡಲೇ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆಗೆ ನಿಯಂತ್ರಣ ಹಾಕಬೇಕು ಎಂದು ಒತ್ತಾಯಿಸಿದರು.
Kshetra Samachara
03/02/2021 12:50 pm