ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಫ್ಲೈ ಓವರ್ ನಿರ್ಮಾಣಕ್ಕೆ ಅವಶ್ಯವಿರುವ ಹಣಕಾಸಿನ ಕೊರತೆ ನೀಗಿಸಲು ನವನಗರದ ಪಾಲಿಕೆಯ ಆಸ್ತಿಯನ್ನು ಹರಾಜು ಮಾಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನವನಗರದ ಪಾಲಿಕೆಯ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದರು.
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿನ ಬಿ.ಆರ್.ಟಿ.ಎಸ್ ಯೋಜನೆ ಅವೈಜ್ಞಾನಿಕವಾಗಿದ್ದು,ಈ ಯೋಜನೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈಗ ಮತ್ತೆ ಕೋಟ್ಯಾಂತರ ರೂಪಾಯಿ ವ್ಯಯ ಮಾಡಿ ಫ್ಲೈಓವರ್ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮಾರಾಟ ಸರಿಯಾದ ಕ್ರಮವಲ್ಲ ಎಂದು ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಗೌರಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
03/02/2021 03:43 pm