ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಇರುವ ಗಾಂಧಿ ಪ್ರತಿಮೆ ಎದುರು ರೈತ ಹಿತರಕ್ಷಣಾ ಪರಿವಾರದ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ, ಶ್ರೀಶೈಲಗೌಡ ಕಮತರ ಸೇರಿದಂತೆ ಅನೇಕರ ಮುಂದಾಳತ್ವದಲ್ಲಿ ನಡೆಯುತ್ತಿರುವ ಈ ಧರಣಿಗೆ ಪ್ರತಿದಿನ ಒಂದೊಂದು ಗ್ರಾಮದ ರೈತರು ಬೆಂಬಲ ಸೂಚಿಸುತ್ತಿದ್ದಾರೆ.
ಇಂದು ನವಲಗುಂದ ತಾಲೂಕಿನ ಶಿರೂರು ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡರ ಸೇರಿದಂತೆ ಅನೇಕ ರೈತರು ಈ ಧರಣಿಗೆ ಬೆಂಬಲ ಸೂಚಿಸಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
Kshetra Samachara
03/02/2021 07:47 pm