ಹುಬ್ಬಳ್ಳಿ: ಧಾರವಾಡದ ಇಟ್ಟಿಗಟ್ಟಿ ಬೈಪಾಸ್ ಬಳಿ ರಸ್ತೆಯಲ್ಲಿ ಇತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯರ ಕುಟುಂಬದ ಸದಸ್ಯರು, ದಾವಣಗೆರೆ ಹಾಗೂ ಹುಬ್ಬಳ್ಳಿ -ಧಾರವಾಡ ನಾಗರಿಕ ಸುರಕ್ಷತಾ ವೇದಿಕೆಯ ವತಿಯಿಂದ ಫೆ.6 ರಂದು ಬೆಳಿಗ್ಗೆ 11 ಕ್ಕೆ ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಚ್ ನಿರಲಕೇರಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ,ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ನಿರ್ಲಕ್ಷ್ಯ ಧೋರಣೆಗೆ ಅಮಾಯಕ ಜೀವಗಳು ಬಲಿಯಾಗಿವೆ. ಈ ಹಿನ್ನೆಲೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕು ಎಂಬ ದೃಷ್ಟಿಯಿಂದ ಈ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಕ ಇಂತಹ ಅವಘಡಗಳ ಕುರಿತು ಜನಜಾಗೃತಿಯನ್ನು ಮೂಡಿಸಲಾಗುವದು ಇಂತಹ ಕೃತ್ಯಕ್ಕೆ ಕಾರಣಿಭೂತರಾದ್ದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುವದು ಎಂದರು.
ಹುಬ್ಬಳ್ಳಿ ಧಾರವಾಡ ನಡುವಿನ ಬೈಪಾಸ್ ರಸ್ತೆ ಅಗಲೀಕರಣ ಮಾಡಬೇಕು. ಅಲ್ಲಿಯವರೆಗೂ ಯಾವುದೇ ಟೋಲ್ ಸಂಗ್ರಹ ಮಾಡಬಾರದು. ಅತೀ ವೇಗಕ್ಕೆ ಕಡಿವಾಣಕ್ಕೆ ಹಂಪ್ಸ, ತಡೆಗೋಡೆ ನಿರ್ಮಿಸಬೇಕು. ಈ ರಸ್ತೆಯ ಚತುಷ್ಪತ ಅಥವಾ ಅಷ್ಟಪತವನ್ನಾಗಿ ಪರಿವರ್ತನೆ ಮಾಡಲು ಮುಂದಾಗಬೇಕು. ಈ ಕುರಿತು ಮಾ18 ರೊಳಗೆ ಅಗತ್ಯ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ ಜೊತೆಗೆ ಜನಜಾಗೃತಿ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಎಚ್ಚರಿಸಿದರು.
Kshetra Samachara
04/02/2021 02:13 pm