ಅಣ್ಣಿಗೇರಿ: ರಾಜ್ಯದಲ್ಲಿರುವ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಣ್ಣಿಗೇರಿಯಲ್ಲಿ ಇಂದು ಕೆಲಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ಮೆರವಣಿಗೆಯನ್ನು ಪಟ್ಟಣದ ಶ್ರೀ ಅಮೃತೇಶ್ವರ ದೇವಸ್ಥಾನದ ಆವರಣದಿಂದ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಪುರಸಭೆ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣಿ, ಬಿಜೆಪಿ ಮುಖಂಡ ಷಣ್ಮುಖ ಗುರಿಕಾರ, ಚಂಬಣ್ಣ ಹಾಳದೋಟರ, ಬಾಪುಗೌಡ್ರ ಪಾಟೀಲ. ಶಿವಯೋಗಿ ಲಿಂಬಿಕಾಯಿ, ಶಿವಕುಮಾರ ಬಳಿಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
08/02/2021 10:00 pm