ಕುಂದಗೋಳ : ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿ ಸರ್ವ ಸದಸ್ಯರಿಗೂ ಶಾಲು ಹೊದಿಸಿ ಸನ್ಮಾನಿಸಿ ಹೂ ಗುಚ್ಚ ನೀಡಿದರು. ಸಮಾರಂಭ ಉದ್ದೇಶಿಸಿ ಗ್ರಾಪಂ ಅಧ್ಯಕ್ಷ ರಾಜೇಂದ್ರ ಶಿರಮಣ್ಣನವರ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಏರ್ಪಡಿಸಿ ಸಮಾರಂಭ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಗ್ರಾಮ ಏಳ್ಗೆ ಹಾಗೂ ಅಭಿವೃದ್ಧಿ ಪರ ಕಾರ್ಯ ಮಾಡುತ್ತೆವೆ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೆಣ್ಣು ಮಗುವಿಗಾಗಿ ಜಾರಿಗೆ ಭಾಗ್ಯಲಕ್ಷ್ಮಿ ಯೋಜನೆ ಬಾಂಡ್ ಗಳನ್ನು ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಪಾಲಕರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಂದ್ರ ಶಿರಮಣ್ಣನವರ ಹಾಗೂ ಸರ್ವ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
09/02/2021 07:34 pm