ಧಾರವಾಡ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಾಳೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಮಂಜುನಾಥ ಜಕ್ಕಣ್ಣವರ ಹೇಳಿದರು.
ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿದ ಮಂಜುನಾಥ, ಕೇಂದ್ರ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡುತ್ತಿದೆ ಇದು ಜನ ಸಾಮಾನ್ಯರ ಮೇಲೆ ಹೊರೆಯಾಗುತ್ತಿದೆ. ಅಲ್ಲದೇ ದಿನ ಬಳಕೆ ವಸ್ತುಗಳ ಬೆಲೆಯನ್ನು ಕೂಡ ಸರ್ಕಾರ ಏರಿಕೆ ಮಾಡುತ್ತಿದ್ದು, ಜನ ಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ನಾಳೆ ಧಾರವಾಡದ ಜ್ಯುಬಿಲಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಪ್ರತಿಭಟನೆಯ ನಂತರ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ 100 ಜನ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದೂ ಮಂಜುನಾಥ ತಿಳಿಸಿದರು.
Kshetra Samachara
09/02/2021 08:00 pm