ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : 2ಎ ಮೀಸಲಾತಿಗೆ ಪಂಚಮಸಾಲಿ ಸಮಾಜದ ಒಗ್ಗಟ್ಟಿನ ಕೂಗು

ಕುಂದಗೋಳ : ಪಂಚಮಸಾಲಿ ಸಮಾಜ ಆರ್ಥಿಕವಾಗಿ ಹಿಂದುಳಿದೆ ಈ ಸಮಾಜದ ಮಕ್ಕಳಿಗೆ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಒದಗಬೇಕಾದ ಸವಲತ್ತುಗಳು ಸರಿಯಾಗಿ ಸಿಗುತ್ತಿಲ್ಲ.

ಪಂಚಮಸಾಲಿ ಸಮಾಜ ಕೇವಲ ಏಕ ಜಾತಿಯವಾಗಿರದೇ ಹಲವಾರು ಸಮುದಾಯಗಳನ್ನು ತಮ್ಮೊಳಗೆ ಒಳಗೊಂಡಿದೆ. ಈ ಕಾರಣದಿಂದ ಆರ್ಥಿಕವಾಗಿ ಶೈಕ್ಷಣಿಕವಾಗಿ ಪಂಚಮಸಾಲಿ ಸಮಾಜವನ್ನು ಬಲಪಡಿಸಲು 2ಎ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಸಮಾಜದ ಮುಖಂಡರು ತಹಶೀಲ್ದಾರ ಬಸವರಾಜ ಮೆಳವಂಕಿ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ವೈ ಅವರಿಗೆ ಮನವಿ ಸಲ್ಲಿಸಿದರು.

ತಹಶೀಲ್ದಾರ ಕಚೇರಿ ಎದುರು ಧಾವಿಸಿದ ಪಂಚಮಸಾಲಿ ಸಮಾಜದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ಪ್ರತಿಭಟನೆ ನಡೆಸಿ ತಹಶೀಲ್ದಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ತಾಲೂಕ ಅಧ್ಯಕ್ಷ ಶ್ರೀಕಂಠಗೌಡ ಪಾಟೀಲ, ಪಂಚಮಸಾಲಿ ಸಮಾಜದ ಮುಖಂಡ ಸೋಮರಾವ್ ದೇಸಾಯಿ, ನಾಗಾರಾಜ ದೇಶಪಾಂಡೆ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಹಿರಿಯರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

10/02/2021 01:35 pm

Cinque Terre

15.59 K

Cinque Terre

1

ಸಂಬಂಧಿತ ಸುದ್ದಿ