ಹುಬ್ಬಳ್ಳಿ- ಹುಬ್ಬಳ್ಳಿ ಧಾರವಾಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ, ಜಯ ಕರ್ನಾಟಕ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೆ ರ‌್ಯಾಲಿ ಮೂಲಕ ಪ್ರತಿಭಟನೆ ಮಾಡಿದರು.
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳು ಸ್ಮಾರ್ಟ್ ಸಿಟಿ ಯೋಜನೆಗೆ ಬರುವುದರಿಂದ ದ್ವಿಚಿಕ್ರ ವಾಹನಗಳಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಬೈಕ್ ಸವಾರರು ಪರದಾಡುತ್ತಿದ್ದಾರೆ. ಆದ ಕಾರಣ ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಪಾರ್ಕಿಂಗ್ ಗೆ ಒಂದು ವ್ಯವಸ್ಥೆ ಮಾಡಿ ಕೊಡಬೇಕೆಂದು ಜಯ ಕರ್ನಾಟಕ ವತಿಯಿಂದ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು...
Kshetra Samachara
10/02/2021 02:14 pm