ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಸಮಗ್ರ ಏಳ್ಗೆ ಸದಸ್ಯರ ಪಣ

ಕುಂದಗೋಳ : ಪಟ್ಟಣ ಪಂಚಾಯಿತಿ ಅಧ್ಯಕ್ಷ ವಾಗೀಶ ಗಂಗಾಯಿ ಹಾಗೂ ಉಪಾಧ್ಯಕ್ಷೆ ಭುವನೇಶ್ವರಿ ಕವಲಗೇರಿ ಅವರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರ ಸಾಮಾನ್ಯ ಸಭೆ ಪಟ್ಟಣ ಪಂಚಾಯಿತಿ ಸಭಾ ಭವನದಲ್ಲಿ ನಡೆಯಿತು.

ಕುಂದಗೋಳ ಪಟ್ಟಣ ಪಂಚಾಯಿತಿಯ 19 ವಾರ್ಡ್ ಗಳ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ಸೌಕರ್ಯ ಹಾಗೂ ನೈರ್ಮಲ್ಯ ಚರಂಡಿ ನಿರ್ಮಾಣಗಳ ಸರ್ವ ಸದಸ್ಯರು ಚರ್ಚೆ ನಡೆಸಿದರು.

ಬಳಿಕ ಕಳೆದ ಅವಧಿಯ 15ನೇ ಹಣಕಾಸು ಯೋಜನೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳ ಆರಂಭದ ಕುರಿತು ಇತರ ಸದಸ್ಯರು ಚರ್ಚೆ ನಡೆಸಿದರು. ಮುಂಬುರುವ ದಿನಗಳಲ್ಲಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಸರ್ಕಾರಿ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಹೆಚ್ಚಿನ ಅನುದಾನ ತರುವಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್ ಹಾಗೂ ಇತರ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

10/02/2021 04:58 pm

Cinque Terre

23.21 K

Cinque Terre

0

ಸಂಬಂಧಿತ ಸುದ್ದಿ