ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ರದ್ದು ಪಡಿಸಬೇಕು ಹಾಗೂ ತೈಲ ಬೆಲೆ ಏರಿಕೆ ಖಂಡಿಸಿ, ಹುಬ್ಬಳ್ಳಿ ಮಹಾನಗರ ಘಟಕ ಕಾಂಗ್ರೆಸ್ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರರ ಕಚೇರಿ ವರೆಗೆ ರ‌್ಯಾಲಿ ಮಾಡುವುದರ ಮೂಲಕ ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರಕಾರ ರೈತ ವಿರೋದಿ ಕಾಯ್ದೆಗಳನ್ನು ಹಿಂಡೆಯಬೇಕು ಹಾಗೂ ತೈಲ ಬೆಲೆ ಇಳಿಕೆ ಮಾಡಬೇಕು ಎಂದು ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿದರು.
Kshetra Samachara
13/02/2021 03:25 pm