ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿ ಹಾಗೂ ಹೂಡಿಕೆ ಅವಕಾಶಗಳ ಸಮಾವೇಶಕ್ಕೆ ಜಗದೀಶ್ ಶೆಟ್ಟರ್ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ಆಯೋಜನೆ ಮಾಡಲಾಗಿದ್ದ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೋದ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸುವ ಸದುದ್ದೇಶದಿಂದ ಹೊಸ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳನ್ನು ನೀಡಲಾಗುತ್ತಿದೆ.ಈಗಾಗಲೇ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕದಂತಹ ಸಮಾವೇಶಗಳನ್ನು ಮಾಡುವ ಮೂಲಕ ಕೈಗಾರಿಕಾ ಸ್ಥಾಪನೆಗೆ ಹೊಸ ಅಧ್ಯಾಯವನ್ನು ಬರೆಯಲಾಗಿದ್ದು,ಈಗಾಗಲೇ ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ.

ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೊದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ವಿನಂತಿಸಿಕೊಂಡರು.

Edited By : Manjunath H D
Kshetra Samachara

Kshetra Samachara

13/02/2021 04:30 pm

Cinque Terre

29.49 K

Cinque Terre

2

ಸಂಬಂಧಿತ ಸುದ್ದಿ