ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಗರದಲ್ಲಿ ನಿರಂತರ ನೀರು ಪೂರೈಕೆ:ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಇನ್ನು ಎರಡು-ಮೂರು ವರ್ಷದಲ್ಲಿ 24/7 ಗಂಟೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.ನಗರದ ಲಕ್ಷ್ಮೀ ಲೇಔಟ್ ನ ಉದ್ಯಾನವನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಅನುದಾನದಲ್ಲಿ ನಿರ್ಮಿಸುತ್ತಿರುವ ಬಯಲು ರಂಗಮಂದಿರದ ಕಟ್ಟಡ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ ನಗರದ ಶೇ.30 ರಷ್ಟು ಪ್ರದೇಶದಲ್ಲಿ ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಈಗ ಎಲ್ ಆ್ಯಂಡ್ ಟಿ ಏಜೆನ್ಸಿಯವರು ಈ ಟೆಂಡರ್ ಪಡೆದುಕೊಂಡಿದ್ದು, ನಗರದಲ್ಲಿ ಸಮೀಕ್ಷೆ ಕೂಡ ಆರಂಭಿಸಿದ್ದಾರೆ. ಶೀಘ್ರವೇ ನಗರದಲ್ಲಿ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಲೇಔಟ್ ನ ನಿವಾಸಿಗಳು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶೆಟ್ಟರ್ ಅವರು, ಲಕ್ಷ್ಮೀ ಲೇಔಟ್ನ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಪಾದಚಾರಿ ಮಾರ್ಗ. ಉದ್ಯಾನವನ ಅಭಿವೃದ್ಧಿಪಡಿಸಲಾಗಿದೆ. ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರ (ಎಂ.ಡಿ) ಜೊತೆ ಚರ್ಚಿಸಲಾಗಿದೆ. ಇನ್ನುಳಿದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತೋಳನಕೆರೆಯ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಬರುವ ದಿನಗಳಲ್ಲಿ ನಗರದ ಆಕಷಿರ್ಣಿಯ ಪ್ರವಾಸಿ ಕೇಂದ್ರವಾಗಲಿದೆ. ಇದು ಉಣಕಲ್ ಕೆರೆ, ಗ್ಲಾಸ್ ಹೌಸ್ ಗಿಂತ ಸುಂದರವಾಗಿ ನಿರ್ಮಾಣಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನಾ ವಾರ್ಡ್ ನಂ 36ರಲ್ಲಿನ ಉದ್ಯಾನವನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಸಚಿವ ಜಗದೀಶ ಶೆಟ್ಟರ್ ನೆರವೇರಿಸಿದರು.

Edited By : Nirmala Aralikatti
Kshetra Samachara

Kshetra Samachara

13/02/2021 10:20 pm

Cinque Terre

41.52 K

Cinque Terre

6

ಸಂಬಂಧಿತ ಸುದ್ದಿ