ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಸ್ಥಾನ 27ಕ್ಕೇರುವ ಸಾಧ್ಯತೆ

ಪಬ್ಲಿಕ್ ನೆಕ್ಸ್ಟ್ ವಿಶೇಷ ವರದಿ

ಧಾರವಾಡ: ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಈಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯೂ ಮುಕ್ತಾಯಗೊಂಡಿದೆ. ಮೇ ತಿಂಗಳಲ್ಲಿ ಅಧಿಕಾರವಧಿ ಮುಕ್ತಾಯಗೊಳ್ಳಲಿರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆ ಏಪ್ರೀಲ್‌ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.

ಹಲವು ವರ್ಷಗಳ ನಂತರ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳ ಪುನರ್ ವಿಂಗಡಣೆಗೆ ಮಾರ್ಗಸೂಚಿ ಹೊರಡಿಸಿದೆ.

ಚುನಾವಣಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಂದ ಈಗಾಗಲೇ ಗ್ರಾಮೀಣ ಪ್ರದೇಶದ ಜನಸಂಖ್ಯೆ ವಿವರವನ್ನು ಪಡೆದಿದೆ. ಕರ್ನಾಟಕ ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ) ಅಧಿನಿಯಮ 2015 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ 2020ರ ಅನ್ವಯ ಜಿಪಂ ಮತ್ತು ತಾಪಂ ಸದಸ್ಯ ಸ್ಥಾನಗಳನ್ನು ನಿಗದಿಪಡಿಸಿದೆ. ಕ್ಷೇತ್ರಗಳನ್ನು ಪುನರ್ ರಚಿಸಲು ಮುಂದಾಗಿರುವ ಆಯೋಗ, ಅದರ ಮಾರ್ಗಸೂಚಿಯನ್ನು ಹೊರಡಿಸಿದೆ. ಆಯಾ ಜಿಲ್ಲೆಗಳ ವ್ಯಾಪ್ತಿಯ ತಾಪಂ, ಜಿಪಂ ಕ್ಷೇತ್ರಗಳನ್ನು ಪುನರ್ ರಚಿಸಲು ನಕ್ಷೆ ಕಳುಹಿಸಲು ಸೂಚಿಸಿದೆ.

ಈ ಹಿಂದೆ ಧಾರವಾಡ ಜಿಪಂ 22 ಸದಸ್ಯ ಬಲ ಹೊಂದಿತ್ತು. ಪುನರ್ ವಿಂಗಡಣೆಯ ನಂತರ ಆ ಸಂಖ್ಯೆ 27 ಕ್ಕೆ ಏರಿಕೆಯಾಗಲಿದೆ. ಈ ಮೊದಲು 5 ತಾಲೂಕುಗಳನ್ನು ಹೊಂದಿದ್ದ ಜಿಲ್ಲೆಯಲ್ಲೀಗ ಅಣ್ಣಿಗೇರಿ ಹಾಗೂ ಅಳ್ನಾವರ ನೂತನ ತಾಲೂಕುಗಳು ಅಸ್ತಿತ್ವಕ್ಕೆ ಬಂದಿವೆ. ಜಿಲ್ಲೆಯಾದ್ಯಂತ ಎಲ್ಲ ತಾಲೂಕು ಸೇರಿ 82 ಇದ್ದ ತಾಪಂ ಸದಸ್ಯರ ಸಂಖ್ಯೆ 87 ಕ್ಕೆ ಏರಿಕೆಯಾಗಲಿದೆ.

ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆಗೆ ಆಯೋಗ ಮುಂದಾಗಿದೆ. ಅಲ್ಲದೇ ರಾಜ್ಯಾದ್ಯಂತ ಹೊಸ ತಾಲೂಕುಗಳು ಅಸ್ತಿತ್ವಕ್ಕೆ ಬಂದಿವೆ. ಈಗಿದ್ದ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗ್ರಾಮಗಳು ವಿಸ್ತಾರವಾಗಿವೆ. ಈ ಬಾರಿ ಪುನರ್ ವಿಂಗಡಣೆ ಮಾಡಿಯೇ ಚುನಾವಣೆಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

Edited By : Nirmala Aralikatti
Kshetra Samachara

Kshetra Samachara

14/02/2021 09:03 am

Cinque Terre

47.34 K

Cinque Terre

1

ಸಂಬಂಧಿತ ಸುದ್ದಿ