ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಸುತ್ತಿರುವುದು ಸಾರ್ವಜನಿಕ ಜನಜೀವನದ ಮೇಲೆ ಸಾಕಷ್ಟು ಹೊರೆ ಬಿಳುತ್ತಿದೆ.ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಶಿವಸೇನೆ ಹಾಗೂ ಭೀಮಸೇನೆ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿಯಾಗಿದೆ. ಜನ ಸಾಮಾನ್ಯರಿಗೆ ಇದರ ಹೊರೆ ಹೆಚ್ಚಾಗುತ್ತಿದೆ.ಕೇಂದ್ರ ಸರ್ಕಾರ ಜನಹಿತ ಕಾರ್ಯಗಳನ್ನು ಜಾರಿಗೊಳಿಸಬೇಕು ಹೊರತು ಈ ರೀತಿ ಬೆಲೆ ಏರಿಕೆ ಹೊರೆಯನ್ನು ಹೇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಿಲಿಂಡರ್ ಹಾಗೂ ಪೆಟ್ರೋಲ್ ಬಾಟಲ್ ಬೀದಿಯಲ್ಲಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು.
Kshetra Samachara
15/02/2021 07:57 pm