ಧಾರವಾಡ: ಹುಬ್ಬಳ್ಳಿ ತಾಲೂಕಿನ ಹೊಸ ಅದರಗುಂಚಿ ಪ್ಲಾಟ್, ಬುಡರಶಿಂಗಿ, ಕೊಟಗುಣಸಿ ಗ್ರಾಮಕ್ಕೆ ರಾಷ್ಟ್ರೀಯ ಹೆದ್ದಾರಿ ಹೊಂದಿಕೊಂಡಿದ್ದು, ಸದ್ಯ ಆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಿಂದ ಅದರಗುಂಚಿ ಪ್ಲಾಟ್, ಬುಡರಶಿಂಗಿ ಹಾಗೂ ಕೊಟಗುಣಸಿ ಗ್ರಾಮಗಳ ಜನರಿಗೆ ಸಾಕಷ್ಟು ತೊಂದರೆಯಾಗಲಿದ್ದು, ಇದಕ್ಕೆ ಪರ್ಯಾಯವಾಗಿ ಫ್ಲೈ ಓವರ್ ನಿರ್ಮಿಸಿಕೊಡಬೇಕು ಎಂದು ಅಲ್ಲಿನ ನಿವಾಸಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಗ್ರಾಮಗಳ ಜನರು ಪ್ರತಿನಿತ್ಯ ಸಂಚರಿಸಲು ಇದೇ ರಾಷ್ಟ್ರೀಯ ಹೆದ್ದಾರಿ ಒಂದೇ ಮಾರ್ಗವಾಗಿದ್ದು, ಇದರ ಮೂಲಕ ಸಂಚರಿಸುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ. ರಾತ್ರಿ ಸಮಯದಲ್ಲಿ ಅಪಘಾತಗಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫ್ಲೈ ಓವರ್ ನಿರ್ಮಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
Kshetra Samachara
15/02/2021 09:08 pm