ನವಲಗುಂದ: ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕೃಷಿ ಕಾನೂನು ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬುಧವಾರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನವಲಗುಂದದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕೃಷಿ ಕಾನೂನು ತಿದ್ದುಪಡಿ, ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪಟ್ಟಣದ ಗಣಪತಿ ದೇವಸ್ಥಾನದಿಂದ ಪ್ರತಿಭಟನೆ ಮೆರವಣಿಗೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರ ಹಾಕಿದರು.
ಈ ವೇಳೆ ಧಾರವಾಡ ಜಿಲ್ಲಾ ಗ್ರಾಮೀಣ ಯುತ್ ಕಾಂಗ್ರೇಸ್ ಅಧ್ಯಕ್ಷ ವಿನೋದ ಅಸೂಟಿ, ಮಾಜಿ ಸಚಿವ ಕೆ ಏನ್ ಗಡ್ಡಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಅನೀಲ್ ಕುಮಾರ ಪಾಟೀಲ್ ಸೇರಿದಂತೆ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
Kshetra Samachara
17/02/2021 03:23 pm