ಹುಬ್ಬಳ್ಳಿ: ಪಂಚಮಸಾಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಸಮಾವೇಶದ ಪೂರ್ವಭಾವಿಯಾಗಿ ನಾಳೆ ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಜನಜಾಗೃತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಂಚಮಸಾಲಿ ಸಮುದಾಯದ ಮುಖಂಡ ಗಂಗಾಧರ ದೊಡವಾಡ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಮಹಾನಗರ ಹಾಗೂ ಧಾರವಾಡ ಜಿಲ್ಲೆಯ ಪಂಚಮಸಾಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಇದೇ 21ರಂದು
ಬೆಂಗಳೂರಿನ ಮೈದಾನ ಅರಮನೆಯಲ್ಲಿ ಸಮಾವೇಶ ಆಯೋಜಿಸಲಾಗಿದ್ದು,ಈ ಕುರಿತು ಧಾರವಾಡ ಜಿಲ್ಲಾ ಘಟಕದ ವತಿಯಿಂದ ಜನರಲ್ಲಿ 2ಎ ಹಾಗೂ ಒಬಿಸಿ ಹೋರಾಟದ ಕುರಿತು ಮನವರಿಕೆ ಮಾಡಲು ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನೂ ಧಾರವಾಡ ಜಿಲ್ಲೆ ಪಂಚಮಸಾಲಿ ಸಮುದಾಯದವರು ಮನೆಗೆ ಒಬ್ಬರಂತೆ ಆಗಮಿಸಿ ಪಂಚಮಸಾಲಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ವಿನಂತಿಸಿಕೊಂಡರು.
Kshetra Samachara
17/02/2021 05:54 pm