ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರೈಲು ತಡೆ ನಡೆಸಲು ಮುಂದಾದವರ ಬಂಧನ

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಧಾರವಾಡದಲ್ಲಿ ರೈಲು ತಡೆಯಲು ಮಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದ ಘಟನೆ ನಡೆಯಿತು.

ಆರ್ ಕೆಎಸ್, ಎಐಟಿಯುಸಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಹೋರಾಟಗಾರರು ರೈಲು ತಡೆಯಲು ಮುಂದಾಗಿದ್ದರು.

ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರತಿಭಟನಾಕಾರರನ್ನು ತಡೆದ ರೈಲ್ವೆ ಪೊಲೀಸರು ಅವರಿಗೆ ನಿಲ್ದಾಣದ ಒಳಗೂ ಪ್ರವೇಶ ನೀಡಲಿಲ್ಲ. ಇದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದು ನಂತರ ಬಿಡುಗಡೆ ಮಾಡಿದರು.

Edited By : Manjunath H D
Kshetra Samachara

Kshetra Samachara

18/02/2021 01:55 pm

Cinque Terre

37.42 K

Cinque Terre

1

ಸಂಬಂಧಿತ ಸುದ್ದಿ