ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಸ್.ಎಸ್.ಕೆ ಸಮಾಜಕ್ಕೂ ಪರಿಶಿಷ್ಟ ಪಂಗಡ ಸ್ಥಾನ ನೀಡಿ

ಹುಬ್ಬಳ್ಳಿ: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ(ಎಸ್‌.ಎಸ್‌.ಕೆ) ಸಮಾಜವು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಸಮಾಜಕ್ಕೆ ಪ‍ರಿಶಿಷ್ಟ ಪಂಗಡದ ಸ್ಥಾನ ನೀಡಬೇಕು ಎಂದು ಹುಬ್ಬಳ್ಳಿ–ಧಾರವಾಡದ ಎಸ್‌ಎಸ್‌ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಆಗ್ರಹಿಸಿದರು.

ನಗರದಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು,ಎಸ್‌ಎಸ್‌ಕೆ ಸಮಾಜವನ್ನು ‘2ಎ‘ ಪ್ರವರ್ಗದಲ್ಲಿ ಸೇರಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಎಸ್‌.ಟಿ ಪ್ರವರ್ಗದ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿಯೂ ಎಸ್‌.ಟಿ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ನೀಡಬೇಕು‘ ಅವರು ಹೇಳಿದರು.

ಸಮಾಜದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ನಿಗಮ ಅಥವಾ ಮಂಡಳಿ ಸ್ಥಾಪಿಸಿ, 500 ಕೋಟಿ ಅನುದಾನ ನೀಡಬೇಕು. ಹುಬ್ಬಳ್ಳಿ–ಧಾರವಾಡದಲ್ಲಿ ದೇವಸ್ಥಾನ ನಿರ್ಮಾಣಕ್ಕಾಗಿ ಜಮೀನು ನೀಡಬೇಕು. ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.

Edited By : Manjunath H D
Kshetra Samachara

Kshetra Samachara

20/02/2021 10:05 am

Cinque Terre

33.02 K

Cinque Terre

4

ಸಂಬಂಧಿತ ಸುದ್ದಿ