ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿಭಟನೆಗೆ ಬೆಂಬಲ ಸೂಚಿಸಿದ ಉಗ್ರಪ್ಪ

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ರೈತ ಹಿತರಕ್ಷಣಾ ಪರಿವಾರದವರು ನಿರಂತರ 21 ದಿನಗಳಿಂದ ನಡೆಸುತ್ತಿರುವ ಧರಣಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಬೆಂಬಲ ಸೂಚಿಸಿದರು.

ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಗೆ ಸರ್ಕಾರ ಸ್ಪಂದಿಸದೇ ಇರುವುದು ದುರದೃಷ್ಟಕರ. ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಈ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿವೆ ಎಂದು ಉಗ್ರಪ್ಪ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶ್ರೀಶೈಲಗೌಡ ಕಮತರ, ಪಿ.ಎಚ್.ನೀರಲಕೇರಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.

Edited By : Manjunath H D
Kshetra Samachara

Kshetra Samachara

20/02/2021 02:37 pm

Cinque Terre

25.16 K

Cinque Terre

0

ಸಂಬಂಧಿತ ಸುದ್ದಿ