ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೋಡ್ ಮೇಲೆ ಅಡುಗೆ ಮಾಡ್ತಿದ್ದೀವಿ...ಮನೇಲಿ ಅಡುಗೆ ಮಾಡೋಕೆ ಗ್ಯಾಸ್ ಬೆಲೆ ಕೈ ಸುಡುತ್ತೇ

ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹು-ಧಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ರಸ್ತೆಯಲ್ಲಿಯೇ ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಹಳೇ ಹುಬ್ಬಳ್ಳಿಯ ಇಂಡಿ ಪಂಪ ಎದುರು ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು‌ ತೆಲೆ ಮೇಲೆ ಕಟ್ಟಿಗೆ ಹೊತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ಕೂಡಲೇ ತೈಲ ಬೆಲೆ ಇಳಿಸುವಂತೆ ಒತ್ತಾಯಿಸಿದರು.

ತೈಲ ಬೆಲೆ ಹಾಗೂ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಸಾರ್ವಜನಿಕ ಜನಜೀವನದ ಮೇಲೆ ಹೊರೆಯಾಗುತ್ತಿದೆ.ಲಾಕ್ ಡೌನ್ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಸಂಕಷ್ಟ ಅನುಭವಿಸಿದ ಜನರಿಗೆ ಬೆಲೆ ಏರಿಕೆ ಜೀವ ಹಿಂಡುತ್ತಿದೆ.ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

Edited By : Manjunath H D
Kshetra Samachara

Kshetra Samachara

24/02/2021 02:18 pm

Cinque Terre

43.2 K

Cinque Terre

3

ಸಂಬಂಧಿತ ಸುದ್ದಿ