ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪೊಗರು ಚಿತ್ರತಂಡದ ವಿರುದ್ಧ ಸಿಡಿದೆದ್ದ ಬ್ರಾಹ್ಮಣ ಸಮಾಜ

ಧಾರವಾಡ: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಹಾಗೂ ಹಿಂದೂ ಸಮಾಜವನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಹಿಂದೂ ಸಂಘಟನೆಗಳು ಹಾಗೂ ಬ್ರಾಹ್ಮಣ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

ಹಿಂದೂ ಸಮಾಜವನ್ನು ಈ ರೀತಿ ಅವಮಾನ ಮಾಡುತ್ತಲೇ ಬರಲಾಗುತ್ತಿದೆ. ಕೂಡಲೇ ಚಿತ್ರ ನಿರ್ಮಾಪಕರು ಆ ದೃಶ್ಯಗಳನ್ನು ಕಟ್ ಮಾಡಬೇಕು ಇಲ್ಲದೇ ಹೋದರೆ ಮುಂದೆಯೂ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು ಪೊಗರು ಚಿತ್ರದ ವಿರುದ್ಧ ಧಿಕ್ಕಾರ ಕೂಗಿದರು.

Edited By : Nagesh Gaonkar
Kshetra Samachara

Kshetra Samachara

25/02/2021 04:09 pm

Cinque Terre

23.34 K

Cinque Terre

1

ಸಂಬಂಧಿತ ಸುದ್ದಿ