ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ಕೇಂದ್ರ ಸರಕಾರಿ ಹಾಗೂ ಪಿಂಚಣಿದಾರರಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ಆರೋಗ್ಯ ಸೇವೆ ಆರಂಭಿಸುವಂತೆ ಒತ್ತಾಯ

ಹುಬ್ಬಳ್ಳಿ- ಉತ್ತರ ಕರ್ನಾಟಕ ಭಾಗದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಆರೋಗ್ಯ ಸೇವೆ ಆಸ್ಪತ್ರೆಯನ್ನು ಆರಂಭಿಸುವಂತೆ, ಭಾರತೀಯ ಕೇಂದ್ರ ಸರಕಾರದ ಆರೋಗ್ಯ ಯೋಜನೆಯ ಫಲಾನಿಭವಿಗಳ ಕಲ್ಯಾಣ ಸಂಘದ ಅಧ್ಯಕ್ಷ ಯು.ಜೊ ಮೋಕಾಶಿ ಸರಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿಂದು ಮಾಧ್ಯಮದ ಮೂಲಕ ಮಾತನಾಡಿದ ಅವರು, ಸಧ್ಯ ಕೇಂದ್ರ ಸರಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ರಾಜ್ಯದಲ್ಲಿ ಆರೋಗ್ಯ ಸೇವೆ ಒದಗಿಸುವ ಆಸ್ಪತ್ರೆ, ರಾಜ್ಯದ ಬೆಂಗಳೂರು ನಗರದಲ್ಲಿ ಮಾತ್ರ ಇದ್ದು, ಇದರಿಂದಾಗಿ ಉತ್ತರ ಕರ್ನಾಟಕ ಭಾಗದವರು ಆರೋಗ್ಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ.

ಕಳೆದ ಐವತ್ತು ವರ್ಷಗಳಿಂದ ಸರಕಾರ ಯಾವುದೇ ತರಹದ ನಮ್ಮ ಬಗ್ಗೆ ಚಿಂತನೆ ಮಾಡಿಲ್ಲ, ಆರೋಗ್ಯ ಸಚಿವ ಹರ್ಷವರ್ಧನ್, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರಿಗೆ ಮನವಿ ಕೊಟ್ಟರು ಕೂಡ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ.

ಆದ್ದರಿಂದ ಕೂಡಲೇ ಉತ್ತರ ಕರ್ನಾಟಕ ಭಾಗದಲ್ಲಿ ಆರೋಗ್ಯ ಸೇವೆ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು..

Edited By : Manjunath H D
Kshetra Samachara

Kshetra Samachara

26/02/2021 07:33 pm

Cinque Terre

19.26 K

Cinque Terre

1

ಸಂಬಂಧಿತ ಸುದ್ದಿ