ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಪಡೆದಿರುವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಮಾರ್ಚ್ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲಕುಮಾರ ಪಾಟೀಲ ಹೇಳಿದರು.
ಧಾರವಾಡ ಜಿಲ್ಲೆಯ ಒಟ್ಟು 137 ಗ್ರಾಮ ಪಂಚಾಯತ ಚುನಾವಣೆ ನಡೆದಿದ್ದು, ಇದರಲ್ಲಿ 2 ಗ್ರಾ,ಪಂ ಗಳಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಇದನ್ನು ಹೊರತುಪಡಿಸಿ ನಡೆದ 135 ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 64 ಅಭ್ಯರ್ಥಿಗಳು ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಸಿಂಹ ಮಾಲನ್ನು ಕಾಂಗ್ರೆಸ್ ತೆಗೆದುಕೊಂಡಿದೆ. ಚುನಾವಣೆಯಲ್ಲಿ ಸೋಲು-ಗೆಲುವು ಇರುವುದೇ ಆದರೆ ಬಿಜೆಪಿ ಸತ್ಯ ಮರೆಮಾಚಿ ಹೇಳಿರುವುದು ಖಂಡನೀಯ ಎಂದರು. ಇನ್ನೂ ಸನ್ಮಾನ ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರುಗಳಾದ ಕುಸುಮಾವತಿ ಶಿವಳ್ಳಿ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ನಾಗರಾಜ ಛಬ್ಬಿ, ವೀರಣ್ಣ ಮತ್ತಿಗಟ್ಟಿ ಸೇರಿದಂತೆ ರಾಜ್ಯದ ನಾಯಕರು ಭಾಗಿಯಾಗಲಿದ್ದಾರೆ ಎಂದರು..
Kshetra Samachara
27/02/2021 01:49 pm