ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೃಷಿ ವಿವಿ ಕಾರ್ಯಕ್ರಮಕ್ಕೆ ಮುತ್ತಿಗೆ

ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗಳ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಘಟಿಕೋತ್ಸವ ನಡೆಯುವ ಸಭಾಭವನಕ್ಕೆ ಮುತ್ತಿಗೆ ಹಾಕಿದರು.

ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಪಾಲ್ಗೊಂಡಿದ್ದರು. ಈ ವೇಳೆ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷ ಸುಧೀರ್ ಮುಧೋಳ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ಸಭಾಭವನಕ್ಕೆ ಮುತ್ತಿಗೆ ಹಾಕಿದರು. ಆದರೆ, ಮುಖ್ಯದ್ವಾರದ ಬಳಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು.

ಈ ಮಹಿಳಾ ಉದ್ಯೋಗಿಗಳನ್ನು ಕೃಷಿ ವಿವಿ ಕುಲಪತಿ ಅವರ ಆಪ್ತ ಕಾರ್ಯದರ್ಶಿ ಮುಲ್ಲಾ ಎಂಬುವವರು ಕಚೇರಿ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದರು. ಈ ವೇಳೆ ಅಂಕೋಲಾ ಬಳಿ ಅವರ ಕಾರು ಅಪಘಾತಕ್ಕೀಡಾಗಿ ಆ ಇಬ್ಬರು ಮಹಿಳಾ ಉದ್ಯೋಗಿಗಳು ಮಾತ್ರ ಸಾವನ್ನಪ್ಪಿದ್ದಾರೆ. ಇದರ ಹಿಂದೆ ಬೇರೆ ಉದ್ದೇಶವೇ ಇದ್ದು, ಇದನ್ನು ಸಿಬಿಐ ಅಥವಾ ಸಿಓಡಿ ತನಿಖೆಗೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

27/02/2021 02:43 pm

Cinque Terre

31.9 K

Cinque Terre

0

ಸಂಬಂಧಿತ ಸುದ್ದಿ