ನವಲಗುಂದ: ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ರೈತರೊಂದಿಗೆ ಒಂದು ದಿನ ಬೃಹತ್ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲಾಯಿತು.
ಕೃಷಿ ಸಚಿವ ಬಿ.ಸಿ ಪಾಟೀಲ ಅವರ ನೇತೃತ್ವದಲ್ಲಿ ನವಲಗುಂದ ಮತಕ್ಷೇತ್ರದ ಮೊರಬ, ಶಿರಕೋಳ, ಅಳಗವಾಡಿ, ಬೆಳವಟಗಿ, ಜಾವೂರು ಹಾಗೂ ಗೊಬ್ಬರಗುಂಪಿ ಗ್ರಾಮಗಳಲ್ಲಿ ರೈತರಿಗೆ ಸಮಗ್ರ ಹಾಗೂ ಆಧುನಿಕ ಕೃಷಿ ಬಗ್ಗೆ ಅರಿವು ಹಾಗೂ ಸಂಪೂರ್ಣ ಒಂದು ದಿನ ಅನ್ನದಾತರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿ, ಆತ್ಮಸ್ಥೆರ್ಯ ತುಂಬುವ ವಿಶೇಷ ಪ್ರಯತ್ನದ " ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ತಾಲೂಕಿನ ಬೆಳವಟಗಿ ಗ್ರಾಮದ ಕೃಷಿ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 2020-21 ನೇ ಸಾಲಿನಲ್ಲಿ ಅತ್ಮ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ವಿಭಾಗದಲ್ಲಿ ಆಯ್ಕೆಯಾದ ಕ್ಷೇತ್ರದ ಪ್ರಗತಿಪರ ರೈತರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಜಗದೀಶ ಶೆಟ್ಟರ, ಜಿ.ಪಂ.ಅಧ್ಯಕ್ಷರಾದ ವಿಜಯಲಕ್ಷ್ಮೀ ಪಾಟೀಲ, ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ರೈತರು, ರೈತ ಮುಖಂಡರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/03/2021 10:55 am