ಧಾರವಾಡ: ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಜಿಲ್ಲಾ ಸೂರ್ಯವಂಶ ಕ್ಷತ್ರಿಯ ಕಲಾಲ ಖಾಟಿಕ ಸಮಾಜದವರು ಪ್ರತಿಭಟನೆ ನಡೆಸಿದರು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ನಮ್ಮ ಸಮುದಾಯವನ್ನು ತಕ್ಷಣ ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಗ್ರಹಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಖಾಟಿಕ್ ಸಮಾಜದವರು ಸಾಮಾಜಿಕ ವ್ಯವಸ್ಥೆಯಲ್ಲಿ ಅತೀ ಅಸ್ಪೃಶ್ಯ ಬದುಕು ಸಾಗಿಸುತ್ತಿದ್ದಾರೆ. ನಮ್ಮ ಸಮುದಾಯವು ಆಹಾರಕ್ಕಾಗಿ ಕುರಿ ಮಾಂಸ ಮಾರಾಟ ಮಾಡುವ ವೃತ್ತಿಯಲ್ಲಿ ತೊಡಗಿದೆ. ನಮ್ಮನ್ನು ಮುಟ್ಟಿಸಿಕೊಳ್ಳಲು ಜನ ಅಸಹ್ಯಪಡುತ್ತಿದ್ದಾರೆ. ಈ ಉದ್ದೇಶದಿಂದ ನಮ್ಮ ಸಮಾಜವನ್ನು ತಕ್ಷಣ ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
Kshetra Samachara
01/03/2021 01:26 pm