ಹುಬ್ಬಳ್ಳಿ : ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕುರಿತು ಪೂರ್ವಭಾವಿ ಸಭೆ

ಹುಬ್ಬಳ್ಳಿ : ಮಾರ್ಚ್ 20 ರಂದು ಕಂದಾಯ ಸಚಿವ ಆರ್. ಅಶೋಕ್ ಅವರ ಗ್ರಾಮ ವಾಸ್ತವ್ಯ ಕುರಿತು
ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪೂರ್ವ ಭಾವಿ ಸಭೆ ಜರುಗಿಸಿದರು.

ಸರ್ಕಾರ ಗ್ರಾಮೀಣ ಜನರ ಮನೆ ಬಾಗಿಲಿಗೆ ಬಂದು ಸೇವೆ ಒದಗಿಸಬೇಕು ಎಂಬ ಆಶಯದೊಂದಿಗೆ ಗ್ರಾಮ ವಾಸ್ತವ್ಯವನ್ನು ಜರುಗಿಸಲಾಗುತ್ತದೆ.

ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳ ಕುರಿತಂತೆ ಗ್ರಾಮಸ್ಥರು ಸಚಿವರ ವಾಸ್ತವ್ಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹದು.

ಈಗ ಸಲ್ಲಿಕೆಯಾದ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗುವುದು. ಗ್ರಾಮದ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಲು ಗ್ರಾಮ ವಾಸ್ತವ್ಯ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಗ್ರಾಮಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳನ್ನು ಗ್ರಾಮಸ್ಥರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ತಹಶಿಲ್ದಾರರ ಪ್ರಕಾಶ್ ನಾಶಿ, ನಗರ ತಹಶಿಲ್ದಾರರ ಶಶಿಧರ ಮಾಡ್ಯಳ ಸೇರಿದಂತೆ ಗ್ರಾಮದ ಜನಪ್ರತಿನಿಧಿಗಳು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಆಯೋಜಿಸುವ ಸ್ಥಳಗಳ ಪರಿಶೀಲನೆ ಮಾಡಿದರು.

Kshetra Samachara

Kshetra Samachara

2 months ago

Cinque Terre

42.73 K

Cinque Terre

0