ನವಲಗುಂದ : ಆಶ್ರಯ ಪ್ಲಾಟಿನ ಹಕ್ಕುಪತ್ರ ಬೇಗನೆ ವಿತರಣೆ ಮಾಡಬೇಕು, ಮಹದಾಯಿ ಕಳಸಾ-ಬಂಡೂರಿ ನಾಲಾ ಜೋಡಣೆ ಕಾಮಗಾರಿಗೆ ಆದಷ್ಟು ಬೇಗ ಟೆಂಡರ್ ಕರೆಯಬೇಕು, ನವಲಗುಂದ ಮಾರುಕಟ್ಟೆ ಸ್ಥಳಾಂತರಿಸಿದ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅನುಕೂಲ ಮಾಡಿಕೊಡಬೇಕು ಎಂಬ ಬೇಡಿಕೆಗಳನ್ನು ಹೊತ್ತು ಜಾತ್ಯತೀತ ಜನತಾದಳ ವತಿಯಿಂದ ಇಂದು ನವಲಗುಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಾಜಿ ಶಾಸಕ ಏನ್ ಎಚ್ ಕೋನರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿ ವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.
ಮಹಾದಾಯಿ, ಕಳಸಾ - ಬಂಡೂರಿ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರ ತಕ್ಷಣ ಟೆಂಡರ ಕರೆದು ಕಾಮಗಾರಿಯನ್ನು ಪ್ರಾರಂಭಿಸಬೇಕು, ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆ ಪರಿಹಾರ, ಅತೀವೃಷ್ಟಿ ಯಿಂದ ಹಾನಿಗೊಳಗಾದ ರೈತರಿಗೆ ಹಾಗೂ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವದು ಮತ್ತು ಗ್ಯಾಸ್, ಡಿಸೇಲ್, ಪೆಟ್ರೋಲ್ ದರ ಹೆಚ್ಚಳ, ಆಶ್ರಯ ಫಲಾನುಭವಿಗಳನ್ನು ಆಯ್ಕೆ ಮಾಡಿದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವುದು ಹಾಗೂ ನವಲಗುಂದ ನಗರದ ತರಕಾರಿ ಮಾರುಕಟ್ಟೆಯ ಸ್ಥಳಾಂತರವಾದ ನಂತರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಹಳೆ ಪುರಸಭೆ ಕಟ್ಟಡದ ಆವರಣಕ್ಕೆ ಸ್ಥಳಾಂತರಿಸಬೇಕು ಎಂಬ ಬೇಡಿಕೆಗಳನ್ನು ಹೊತ್ತು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ, ಮುಖ್ಯಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
Kshetra Samachara
01/03/2021 08:51 pm