ಹುಬ್ಬಳ್ಳಿ:ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 29ರಂದು ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 29ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. 10.45 ಕ್ಕೆ ರಸ್ತೆಯ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸುವರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ಮಧ್ಯಾಹ್ನ 3 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ದಿಂದ ರಸ್ತೆ ಮೂಲಕ ಹೊರಟು ಸಂಜೆ 5.30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು. 6 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹೊರಟು ರಾತ್ರಿ 7 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ತಲುಪುವರು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
28/07/2021 07:36 pm