ಧಾರವಾಡ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಹಲವು ಶಾಸಕರ ಬೆಂಬಲಿಗರು ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸೋಶಿಯಲ್ ಮೀಡಿಯಾಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.
ಇದೀಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರಿಗೂ ಸಚಿವ ಸ್ಥಾನ ನೀಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದು ವೈರಲ್ ಆಗುತ್ತಿದೆ.
ಧಾರವಾಡ ನಗರವನ್ನು ಗುಂಢಾ ಮುಕ್ತ ನಗರವನ್ನಾಗಿ ಮಾಡಿದ ಶಾಸಕ ಅಮೃತ ಅವರಿಗೆ ಮಂತ್ರಿ ಸ್ಥಾನ ನೀಡಿ ಇನ್ನೂ ಹೆಚ್ಚಿನ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆ ಫೋಟೋದಲ್ಲಿ ಉಲ್ಲೇಖಿಸಲಾಗಿದೆ.
Kshetra Samachara
28/07/2021 10:14 pm