ಧಾರವಾಡ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ರೇಸ್‌ನಲ್ಲಿರುವ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು, ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಮ್ಮ ಪರವಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪೋಸ್ಟ್‌ಗಳನ್ನು ಹಾಕಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿರುವ ಮುನೇನಕೊಪ್ಪ, ಬಿಜೆಪಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಚರ್ಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ. ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರೋಣ. ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಮೇಲೆ ತೋರುತ್ತಿರುವ ಅಭಿಮಾನವನ್ನು ಗೌರವಿಸುತ್ತೇನೆ. ಆ ರೀತಿ ಇನ್ನು ಮುಂದೆ ಸಚಿವ ಸ್ಥಾನ ನೀಡುವಂತೆ ಯಾರೂ ಪೋಸ್ಟ್ ಹಾಕಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.
Kshetra Samachara
30/07/2021 11:43 am