ಹುಬ್ಬಳ್ಳಿ: ಜೆಡಿಎಸ್ ಯುವ ಮುಖಂಡ, ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಕಾಂಗ್ರೆಸ್ ಬಾವುಟಗಳು ರಾರಾಜಿಸುತ್ತಿವೆ
ಹೌದು,, ನಿನ್ನೆಯಿಂದಲೇ ಹುಬ್ಬಳ್ಳಿಯಲ್ಲಿ ಠಿಕಾಣೆ ಹೂಡಿರುವ ಕೆಪಿಸಿಸಿ ಅದ್ಯಕ್ಷ, ಡಿಕೆ ಶಿವಕುಮಾರ್, ಮಾಜಿ ಸಿಎಮ್ ಸಿದ್ದರಾಮಯ್ಯ, ಮಾಜಿ ಸಚಿವ ಸತೀಶ್ ಜಾರಕಿಹೋಳಿ, ಇಂದು ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಕಾಂಗ್ರೆಸ್ ಮುಕ್ತ ಎಂಬ ಹೇಳಿಕೆ ನೀಡುತ್ತಿದ್ದ ಬಿಜೆಪಿ ಮುಖಂಡರಿಗೆ, ಈ ವ್ಯವಸ್ಥೆ ನೋಡಿದರೆ ಕಮಲಕ್ಕೆ ಟಕ್ಕರ್ ನೀಡಲು ಕಾಂಗ್ರೆಸ್ ಉತ್ತರ ಕರ್ನಾಟಕ ಭಾಗದಲ್ಲಿ ಎಲ್ಲಾ ಸಿದ್ದತೆ ಮಾಡಿಕೊಂಡಿರುವ ಲಕ್ಷಣಗಳು ಕಾಣುತ್ತಿವೆ.
Kshetra Samachara
30/07/2021 01:02 pm