ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಡಿ

ಧಾರವಾಡ: ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆಗೊಳಿಸುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ 2 ವರ್ಷಗಳಿಂದ ಕೊರೊನಾದಿಂದಾಗಿ ಇಡೀ ದೇಶವೇ ತಲ್ಲಣಗೊಂಡಿದೆ. ದೇಶದ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಬದುಕು ತುಂಬಾ ಹೀನಾಯವಾಗಿದೆ. ಈ ಪರಿಸ್ಥಿತಿಯನ್ನು ಕಂಡು ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಜಾರಿ ಮಾಡಿದೆ. ಅವುಗಳನ್ನು ಕಾರ್ಮಿಕರಿಗೆ ಸರಿಯಾಗಿ ತಲುಪಿಸಬೇಕಾದರೆ ಕಾರ್ಮಿಕ ಇಲಾಖೆ ಅಧಿಕಾರಿಗಳ ಪಾತ್ರ ಅತೀ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ಸರಿಯಲ್ಲ. ಈ ರೀತಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತ ಹೋದರೆ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುವುದಿಲ್ಲ ಎಂದು ಒಕ್ಕೂಟದ ಸದಸ್ಯರು ಆತಂಕ ವ್ಯಕ್ತಪಡಿಸಿದರು.

Edited By : Shivu K
Kshetra Samachara

Kshetra Samachara

30/07/2021 02:06 pm

Cinque Terre

22.66 K

Cinque Terre

2

ಸಂಬಂಧಿತ ಸುದ್ದಿ