ಧಾರವಾಡ: ಧಾರವಾಡದ ಕರ್ನಾಟಕ ಹಾಲು ಒಕ್ಕೂಟ ಮಂಡಳಿಯ (ಕೆಎಂಎಫ್) ಅಧ್ಯಕ್ಷರಾಗಿ ಶಂಕರ ಮುಗದ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಬಸವರಾಜ ಅರಬಗೊಂಡ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಾಡಲಾಗಿತ್ತು. ಹೀಗೆ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ದಿನಾಂಕ ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಶಂಕರ ಮುಗದ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಮುಗದ ಅವರೇ ಕೆಎಂಎಫ್ ಅಧ್ಯಕ್ಷರೆಂದು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಿಗೆ ಶಾಸಕ ಅಮೃತ ದೇಸಾಯಿ, ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದರು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯ 12 ಸದಸ್ಯರ ಬಲಾ ಬಲವನ್ನು ಧಾರವಾಡ ಕೆಎಂಎಫ್ ಹೊಂದಿದೆ.
Kshetra Samachara
30/07/2021 02:52 pm