ಹುಬ್ಬಳ್ಳಿ: ರಾಜ್ಯ ಮತ್ತು ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಜತೆಗೆ ಬಹುಸಂಖ್ಯಾತ ಕುರುಬ ಸಮುದಾಯದ ಬೇಡಿಕೆಗಳನ್ನು ನೂತನ ಸಿಎಂ ಬಸವರಾಜ ಬೊಮ್ಮಾಯಿ ಈಡೇರಿಸಬೇಕೆಂದು ಮನಸೂರ ಶ್ರೀ ರೇವಣಸಿದ್ದೇಶ್ವರ ಮಹಾ ಮಠದ ಡಾ. ಬಸವರಾಜ ದೇವರು ಒತ್ತಾಯ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಷ್ಟರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಕಿತ್ತೂರ ಚನ್ನಮ್ಮ, ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಇನ್ನು ಕುರುಬ ಸಮುದಾಯದ ಕೆ.ಎಸ್.ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅದರಂತೆ ಸಿಎಂ ರೇಸ್‌ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೂ ಡಿಸಿಎಂ ಹುದ್ದೆ ನೀಡಬೇಕು. ಇದ ಒಟ್ಟಿಗೆ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಅಮೃತ ದೇಸಾಯಿ ಅವರಿಗೆ ಆದ್ಯತೆ ನೀಡಬೇಕು. ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿ ಸಬೇಕು ಎಂದು ಒತ್ತಾಯಿಸಿದರು.
Kshetra Samachara
31/07/2021 11:16 am