ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಹು ನಿರೀಕ್ಷಿತ ಪಾಲಿಕೆ ಚುನಾವಣೆ ಸಿದ್ಧತೆಗೆ ಜಿಲ್ಲಾಡಳಿತ ಸೂಚನೆ: ಡಿಸಿ ನಿರ್ದೇಶನದಂತೆ ಸಜ್ಜು...!

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಪಾಲಿಕೆಗೆ ಸೂಚನೆ ನೀಡಿದೆ.

ಹೌದು.. ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು ಬಂದಿರುವ ಮಹಾನಗರ ಪಾಲಿಕೆಗೆ ಚುನಾವಣೆ ಸಮೀಪಿಸುತ್ತಿದೆ. ಈಗ ಮತ್ತೇ ಜಿಲ್ಲಾಡಳಿತ ಪಾಲಿಕೆ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುವಂತೆ ಸೂಚನೆ ನೀಡಿದ್ದು, ಈಗ ಕಾರ್ಪೋರೇಷನ್ ಚುನಾವಣಾ ಆಕಾಂಕ್ಷಿತರಿಗೆ ಹಾಗೂ ಮಾಜಿ ಕಾರ್ಪೊರೇಟರ್ ಗಳಿಗೆ ಸಂಭ್ರಮ ಮನೆ ಮಾಡಿದೆ. ಅಲ್ಲದೆ ಈಗಾಗಲೇ ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ, ಪ್ರಜಾಕೀಯ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದ್ದು, ಈಗ ಮಹಾನಗರ ಪಾಲಿಕೆಗೆ ಜಿಲ್ಲಾಡಳಿತದಿಂದ ಸೂಚನೆ ಬಂದಿದೆ.

ಇನ್ನೂ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಿಂದೆ 67 ವಾರ್ಡ್ ಗಳಿದ್ದವು. ಅವುಗಳನ್ನು ಮರು ವಿಂಗಡಿಸಿ 82 ವಾಡ್೯ಗಳನ್ನಾಗಿ ಮಾಡಲಾಗಿದೆ. ಆದರೆ ಇದರಲ್ಲಿ ಕೆಲವೊಂದು ವಾರ್ಡ್ ಗಳಲ್ಲಿ ಮತದಾರರ ಪಟ್ಟಿಯ ಕುರಿತು ಕೆಲವೊಂದು ರಾಜಕೀಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ರೀಟ್ ಅರ್ಜಿಯನ್ನು ಕೂಡ ಹೈಕೋರ್ಟ್ ಗೆ ಸಲ್ಲಿಸಿದ್ದರು. ಇದೆಲ್ಲದರ ನಡುವೆಯೂ ಪಾಲಿಕೆಯು ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರ ಕೋವಿಡ್ ನಿರ್ದೇಶನ ಮೇಲೆ ಚುನಾವಣೆಗೆ ಭರದ ಸಿದ್ಧತೆ ನಡೆಸಿದ್ದು, ಅವಳಿನಗರದಲ್ಲಿ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ.

ಒಟ್ಟಿನಲ್ಲಿ‌ ಅವಳಿನಗರದಲ್ಲಿ 8,13,257 ಜನ ಮತದಾರರು ಈ ಬಾರಿ ಮತ ಚಲಾವಣೆ ಮಾಡಲಿದ್ದು, ಎಲ್ಲ ಮತದಾರರು ಕೂಡ ತಮ್ಮ ಹಕ್ಕನ್ನು ಚಲಾವಣೆ ಮಾಡಲು ಹು-ಧಾ ಅವಳಿನಗರದ ಪಾಲಿಕೆ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದು, ಜಿಲ್ಲಾಡಳಿತ ಮತ್ತಷ್ಟು ಪುಷ್ಟಿಕೊಟ್ಟಿದೆ.cc

Edited By : Nagesh Gaonkar
Kshetra Samachara

Kshetra Samachara

31/07/2021 04:00 pm

Cinque Terre

65.06 K

Cinque Terre

3

ಸಂಬಂಧಿತ ಸುದ್ದಿ