ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಪಶ್ಚಿಮ ಕ್ಷೇತ್ರದ 29 ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರು ಧಾರವಾಡದ ನುಗ್ಗಿಕೇರಿ ಹನುಮಪ್ಪನಿಗೆ ಪಂಚಾಮೃತ ಅಭಿಷೇಕ ಮಾಡಿಸಿದ್ದಾರೆ.
ಬೆಲ್ಲದ ಅವರ ಭಾವಚಿತ್ರ ಹಿಡಿದುಕೊಂಡೇ ದೇವಸ್ಥಾನಕ್ಕೆ ಆಗಮಿಸಿದ ಬೆಲ್ಲದ್ ಅಭಿಮಾನಿಗಳು ಮುಖ್ಯಮಂತ್ರಿ ಸ್ಥಾನದ ಪಟ್ಟಿಯಲ್ಲಿದ್ದ ಬೆಲ್ಲದ್ ಅವರಿಗೆ ಕೊನೆ ಕ್ಷಣದಲ್ಲಿ ಸಿಎಂ ಸ್ಥಾನ ಕೈತಪ್ಪಿದೆ. ಹೀಗಾಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ ಅವರು, ಆಂಜನೇಯನಿಗೆ ಪಂಚಾಮೃತ ಅಭಿಷೇಕ ಮಾಡಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗುವಂತಾಗಲಿ ಎಂದು ಪ್ರಾರ್ಥಿಸಿದರು.
Kshetra Samachara
31/07/2021 07:25 pm