ಅಳ್ನಾವರ- ಪಟ್ಟಣದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಿರುವದು ನಮ್ಮೆಲ್ಲರಿಗೆ ಅತಿ ಸಂತೋಷದಾಯಕ ಆಗಿದೆ ಎಂದು ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ತೆಗೂರ ಹೇಳಿದರು.
ಇತ್ತೀಚೆಗೆ ಪಟ್ಟಣ ಪಂಚಾಯತನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಮಾತನಾಡಿ ಬಾಲ್ಯದಿಂದಲೂ ಸ್ನೇಹಿತರಾದ ಬೊಮ್ಮಾಯಿ ಅವರು ಅಭಿವೃದ್ಧಿ ಚಿಂತಕರಾಗಿದ್ದು ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಹೊಸ ಕೈಗಾರಿಕೆಗಳ ಆರಂಭ ಹಾಗೂ ನಮ್ಮ ನೂತನ ತಾಲೂಕಿನ ಅಭಿವೃದ್ಧಿಗೆ ಸಹಕರಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯತ ಸರ್ವ ಸದಸ್ಯರುಗಳು ಹಾಗೂ ಬಿಜೆಪಿಯ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಇದ್ದರು ಪಟ್ಟಣ ಪಂಚಾಯತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಹಿ ಹಂಚಿ ಸಂಭ್ರಮ ಆಚರಿಸಿದರು.
Kshetra Samachara
02/08/2021 02:55 pm