ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಲ್ಲದ ಪರ ಬ್ಯಾಟ್‌ ಬೀಸುತ್ತಿರುವ ಕಾರ್ಯಕರ್ತರು

ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಬಿಜೆಪಿ ಎಸ್‌ಸಿ ಹಾಗೂ ಎಸ್‌ಟಿ ಮೋರ್ಚಾ ಸದಸ್ಯರು ಕೂಡ ಬೆಲ್ಲದ ಪರವಾಗಿಯೇ ಬ್ಯಾಟ್ ಬೀಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಿದ್ದು, ಸಿಎಂ ಸ್ಥಾನದ ರೇಸ್‌ನಲ್ಲಿದ್ದ ಬೆಲ್ಲದ ಅವರಿಗೆ ಕೊನೆ ಕ್ಷಣದಲ್ಲಿ ಸಿಎಂ ಹುದ್ದೆ ಕೈ ತಪ್ಪಿದೆ. ಹೀಗಾಗಿ ಬೆಲ್ಲದ ಅವರನ್ನು ಸಚಿವ ಸಂಪುಟದಲ್ಲಾದರೂ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇಂದು ಬೆಲ್ಲದ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಧಾರವಾಡದ ಕೆಸಿಡಿ ವೃತ್ತದ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಲ್ಲದ ಅವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

Edited By : Nagesh Gaonkar
Kshetra Samachara

Kshetra Samachara

03/08/2021 02:58 pm

Cinque Terre

14.28 K

Cinque Terre

1

ಸಂಬಂಧಿತ ಸುದ್ದಿ