ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ಮುನೇನಕೊಪ್ಪಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ದೇವರ ಮೊರೆ ಹೋದ ಕಾರ್ಯಕರ್ತರು

ಅಣ್ಣಿಗೇರಿ : ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪಗೆ ಸಚಿವ ಸ್ಥಾನ ನೀಡುವಂತೆ ದೇವರ ಮೊರೆ ಹೋದ ಘಟನೆ ನಡೆದಿದೆ.

ಹೌದು.. ನವಲಗುಂದ ಕ್ಷೇತ್ರದ ಅಭಿವೃದ್ಧಿ ಹರಿಕಾರ ಮತ್ರು ರೈತ ನಾಯಕನಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಬೇಕೆಂದು ದೇವರ ಮೊರೆ ಹೋಗಿದ್ದಾರೆ. ಪಟ್ಟಣದ ಆರಾಧ್ಯ ದೈವ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಬಿಜೆಪಿ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ, ಒಂದು ಬಾರಿ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಇದೆ. ಸಧ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಅಧ್ಯಕ್ಷರಾಗಿ ಸೇವೆ ಮಾಡುತ್ತಿದ್ದಾರೆ. ಇಂತಹ ಯುವ ನಾಯಕರಿಗೆ ಸಚಿವ ಸ್ಥಾನ ನೀಡಬೇಕು. ಗ್ರಾಮೀಣ ಭಾಗದ ಶಾಸಕರಿಗೆ ಮೊದಲ ಆಧ್ಯತೆ ನೀಡಿದರೆ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಶಂಕರಪಾಟೀಲ ಅಭಿಮಾನಿ ಬಳಗದವರು ಈ ಸಂದರ್ಭದಲ್ಲಿ ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

03/08/2021 05:37 pm

Cinque Terre

9.35 K

Cinque Terre

0

ಸಂಬಂಧಿತ ಸುದ್ದಿ