ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಹೆಚ್ಚಿದ ಅರವಿಂದ ಬೆಲ್ಲದ ಸಚಿವ ಸ್ಥಾನದ ಕೂಗು; ಜನ್ಮದಿನ ಆಚರಿಸಿದ ಕಾರ್ಯಕರ್ತರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಜನರಿಗೆ ಹಾಗೂ ಅರವಿಂದ ಬೆಲ್ಲದ ಅಭಿಮಾನಿಗಳಿಗೆ ಇಂದು ಸಂಭ್ರಮದ ದಿನ. ಶಾಸಕ ಅರವಿಂದ 52ನೇ ವರ್ಷದ ಹುಟ್ಟು ಹಬ್ಬ ಆಚರಣೆ ಹಾಗೂ ಸಚಿವ ಸಂಪುಟ ಇತ್ಯರ್ಥದ ಮಹತ್ವದ ದಿನವಾಗಿದ್ದು, ಎಲ್ಲೆಡೆಯೂ ಶಾಸಕ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗುವಂತೆ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.

ಹೌದು.. ಹುಬ್ಬಳ್ಳಿ ಏರ್ಪೋರ್ಟ್ ರಸ್ತೆಯಲ್ಲಿರುವ ಗೆಲಾಕ್ಷಿ ಹಾಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅರವಿಂದ ಬೆಲ್ಲದ ಅಭಿಮಾನಿಗಳು ರಕ್ತದಾನ ಶಿಬಿರ, ನೇತ್ರ ತಪಾಸಣೆ ಶಿಬಿರ ಹಾಗೂ ಕೃತಕ ಕಾಲು ಜೋಡಣೆಯಂತಹ ಕಾರ್ಯಗಳನ್ನು ಮಾಡುವ ಮೂಲಕ ಅರವಿಂದ ಬೆಲ್ಲದ ಅವರ ಜನ್ಮದಿನ ಆಚರಣೆ ಮಾಡಿರುವುದು ಮಾತ್ರವಲ್ಲದೇ ನಮ್ಮೆಲ್ಲರ ನೆಚ್ಚಿನ ನಾಯಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಒತ್ತಾಯಿಸಿದರು.

ಇನ್ನೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಅರವಿಂದ ಬೆಲ್ಲದ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೆ ಯಾವುದೇ ಕಾರಣಕ್ಕೂ ಅರವಿಂದ ಬೆಲ್ಲದ ಅವರನ್ನು ಸಚಿವ ಸಂಪುಟದಲ್ಲಿ ನಿರ್ಲಕ್ಷಿಸದೇ ಸಚಿವ ಸಂಪುಟ ಸ್ಥಾನ ಮಾನ ನೀಡಬೇಕು ಅಂದಾಗ ಮಾತ್ರ ಧಾರವಾಡ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಹೈ ಕಮಾಂಡ್ ಗೆ ಸೂಚನೆ ನೀಡಿದ ಕಾರ್ಯಕರ್ತರು ಅರವಿಂದ ಬೆಲ್ಲದ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿ ಸಚಿವ ಸ್ಥಾನಕ್ಕೆ ಆಗ್ರಹಿಸಿದರು.

ಒಟ್ಟಿನಲ್ಲಿ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನಕ್ಕೆ ಅವಳಿನಗರದಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಹೈ ಕಮಾಂಡ್ ಅಂಗಳದಲ್ಲಿ ಸಂಭಾವ್ಯ ಪಟ್ಟಿಯಲ್ಲಿ ಅರವಿಂದ ಬೆಲ್ಲದ ಅವರ ಹೆಸರು ಕೇಳಿ ಬರುತ್ತಿದ್ದು, ಯಾವ ಹೂವು ಯಾರ ಮುಡಿಗೆ ಎಂಬುವುದನ್ನು ಕಾದು ನೋಡಬೇಕಿದೆ.

ಮಲ್ಲೇಶ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
Kshetra Samachara

Kshetra Samachara

03/08/2021 06:06 pm

Cinque Terre

36.56 K

Cinque Terre

5

ಸಂಬಂಧಿತ ಸುದ್ದಿ