ಧಾರವಾಡ: ಧಾರವಾಡ ತಾಲೂಕಿನ ತಡಕೋಡ ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ಧ ಅಲ್ಲಿನ ಸ್ಥಳೀಯರೇ ಗ್ರಾಮ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮ ಪಂಚಾಯ್ತಿ ಸದಸ್ಯ ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯರು, ಗ್ರಾಮಸ್ಥರು ಯಾವುದೇ ಕೆಲಸ ಕಾರ್ಯದ ಸಲುವಾಗಿ ಪಂಚಾಯ್ತಿಗೆ ಹೋದರೆ ಪಿಡಿಓ ಸರಿಯಾಗಿ ಸ್ಪಂದಿಸುವುದಿಲ್ಲ. ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕೇಳಿದರೆ ಇಲ್ಲ ಸಲ್ಲದ ನೆಪ ಹೇಳಿ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ. ಮಾಹಿತಿ ಹಕ್ಕಿನಡಿ ಕೊಟ್ಟ ಅರ್ಜಿಗಳಿಗೆ ಸರಿಯಾದ ಉತ್ತರ ಸಹ ನೀಡುವುದಿಲ್ಲ. ಉಡಾಫೆ ಉತ್ತರ ನೀಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಮೇಲಾಧಿಕಾರಿಗಳು ಪಿಡಿಓ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
Kshetra Samachara
03/08/2021 10:09 pm