ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ.
ಹುಬ್ಬಳ್ಳಿಯಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದು, ನಗರದ ಕೇಶ್ವಾಪುರ ವೃತ್ತದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
ಇನ್ನೂ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದ ಬೆಂಬಲಿಗರು ಹಾಗೂ ಕಾರ್ಯಕರ್ತರು ಶಂಕರ ಪಾಟೀಲ್ ಮುನೇನಕೊಪ್ಪ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.
Kshetra Samachara
04/08/2021 01:55 pm