ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಾರಕಕ್ಕೆ ಏರಿದ ಬೆಲ್ಲದ ಅಭಿಮಾನಿಗಳ ಹೋರಾಟ: ರಾಷ್ಟ್ರೀಯ ಹೆದ್ದಾರಿ ತಡೆದು ಕಿಡಿ ಕಾರಿದ ಅಭಿಮಾನಿಗಳು

ಹುಬ್ಬಳ್ಳಿ: ಅತ್ತ ನೂತನ ಸಚಿವರ ಪದಗ್ರಹಣ ಇತ್ತ ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಅಭಿಮಾನಿಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹುಬ್ಬಳ್ಳಿಯ ಹೊರಹೊಲಯದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು. ಗೋಕುಲ ಹತ್ತಿರದ ಹನುಮಂತ ಮಂದಿರ ಬಳಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಶಾಸಕ ಅರವಿಂದ್ ಬೆಲ್ಲದ ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಇನ್ನೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಏಕಾಏಕಿ ರಸ್ತೆಯಲ್ಲಿ ಟೈಯರ್ ಬೆಂಕಿ ಹಚ್ಚಿ ಹೈ ಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಇದೇ ವೇಳೆ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲ ಕಾಲ ಟ್ರಾಫಿಕ್ ಕಿರಿ ಕಿರಿ ಉಂಟಾಯಿತು.

Edited By : Manjunath H D
Kshetra Samachara

Kshetra Samachara

04/08/2021 07:09 pm

Cinque Terre

29.73 K

Cinque Terre

5

ಸಂಬಂಧಿತ ಸುದ್ದಿ