ಕುಂದಗೋಳ : ಗ್ರಾಮದಲ್ಲಿ ನಡೆಯುವ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮಕ್ಕೆ ಸಭಾ ಭವನ ಅವಶ್ಯಕವಾಗಿವೆ ಗ್ರಾಮದ ಜನರು ಪರಸ್ಪರ ಬೇರೆಯಲು ಸಭಾ ಭವನ ವೇದಿಕೆಯಾಗಿವೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ತಾಲೂಕಿನ ಗುರುವಿನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 12 ಲಕ್ಷ ವೆಚ್ಚದ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
Kshetra Samachara
04/08/2021 08:49 pm